ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಹಣ, ತಿಂಡಿಯ ಆಮಿಷವೊಡ್ಡಿ ಕೃತ್ಯ ಎಸಗಿದ ಯುವಕ

ಮಂಗಳೂರು : ಒಂಬತ್ತು ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋಟೆಕಾರು ಪೋಸ್ಟ್ ವ್ಯಾಪ್ತಿಯ ಮಡ್ಯಾರ್ ನಿವಾಸಿ, ಬಿಜೈನ ಲಾಜಿಸ್ಟಿಕ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆಶೀಶ್ ಪೂಜಾರಿ (33) ಬಂಧಿತ ಆರೋಪಿ. ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ವಿಕೃತ ಚಟುವಟಿಕೆಗಳಿಗೆ ಪ್ರೇರೇಪಿಸಿದಲ್ಲದೆ, ದೈಹಿಕ ದೌರ್ಜನ್ಯ ಎಸಗಿರುವ ಬಗ್ಗೆ ಪೋಷಕರು ನೀಡಿದ ದೂರಿನ ಮೇರೆಗೆ ಬುಧವಾರ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಇಂತಹ ವಿಕೃತ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.



























































 
 
error: Content is protected !!
Scroll to Top