ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ

ಫಾರ್ಚುನರ್‌ ಕಾರಲ್ಲಿ ದನಗಳನ್ನು ಸಾಗಿಸುತ್ತಿದ್ದ ಆರೋಪಿಗಳು

ಮಂಗಳೂರು: ದನಗಳನ್ನು ವಧೆಗಾಗಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬುಧವಾರ ಮುಂಜಾನೆ ಸುಮಾರು 4.30ರ ವೇಳೆಗೆ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಬಜರಂಗದಳ ಸಂಘಟನೆಯ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು.



























































 
 

ಈ ವೇಳೆ ಕಾರಿನೊಳಗೆ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು ಸಾಗಿಸುತ್ತಿರುವುದು ಪತ್ತೆಯಾಯಿತು. ಪೊಲೀಸರು ವಾಹನವನ್ನು ತಡೆದ ತಕ್ಷಣ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ.

ಇನ್ನಷ್ಟು ಪರಿಶೀಲನೆ ನಡೆಸಿದ ವೇಳೆ ಫಾರ್ಚುನರ್ ಕಾರಿನಲ್ಲಿ ಮಾರಕಾಯುಧವೂ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top