ಚಿಕ್ಕಮಗಳೂರು: ವಿದ್ಯುತ್ ಕಂಬವೊಂದಕ್ಕೆ ಸರ್ಕಾರಿ ಬಸ್ ಗುದ್ದಿದ್ದು, ಎಂಟು ಮಂದಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕೊಡಾಳ್ ಸಮೀಪ ನಡೆದಿದೆ.
ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸು ಕುಕ್ಕನೂರಿನಿಂದ ಧರ್ಮಸ್ಥಳದತ್ತ ತೆರಳುತ್ತಿತ್ತು. ನಲವತ್ತಕ್ಕೂ ಅಧಿಕ ಪ್ರಯಾಣಿಕರು ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅಪಘಾತದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

























