ಬೆಂಗಳೂರು: ತುಮಕೂರಿನಲ್ಲಿ ಏ.1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ.
ಮಾ.31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ ರಾಜಭವನದಲ್ಲಿ ತಂಗಲಿದ್ದಾರೆ. ಏ.1ರಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಸಿದ್ದಗಂಗಾ ಶ್ರೀಗಳ ಗದ್ದಿಗೆ ದರ್ಶನ ಪಡೆದು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು ಒಂದೂವರೆ ಗಂಟೆಗಳ ಕಾಲ ಇರಲಿದ್ದಾರೆ ಎಂದು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಮಾಹಿತಿ ನೀಡಿದ್ದಾರೆ.

