ಚಾಲಕನ ನಿದ್ರೆಯ ಮಂಪರಿನಿಂದ ಸಂಭವಿಸಿದ ಭೀಕರ ಅಪಘಾತ
ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚನ್ನಪಟ್ಟಣ ಬಳಿ ಬೆಳ್ಳಂಬೆಳಗ್ಗೆ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕೇರಳಂ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಮೃತದೇಹಗಳು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

























