ಮಾದಕ ದ್ರವ್ಯ ಸೇವಿಸಿದ ಯುವಕನಿಂದ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ: ಬಂಧನ

ಉಪ್ಪಿನಂಗಡಿ: ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಕಾಸರಗೋಡು ನಿವಾಸಿ ಯೂಸುಫ್ ಸಿ. ಇ. ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ಹೋಗಿತ್ತು. ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿದೆ.























































 
 

ಪರೀಕ್ಷಾ ವರದಿಯಲ್ಲಿ ಯುವಕ ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದೆ.

error: Content is protected !!
Scroll to Top