17 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ಬಲೆಗೆ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 17 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ದೇರಳಕಟ್ಟೆಯ ನಾಟೇಕಲ್ ನಿವಾಸಿ ರಿಯಾಜ್ ಎಂದು ಗುರುತಿಸಲಾಗಿದೆ.

ಈತ ಬರ್ಕೆ ಪೊಲೀಸ್‌ ಠಾಣೆಯ ಅಪರಾಧ ಕ್ರಮಾಂಕ 15/2009ರಡಿ, ಕಾಪಿರೈಟ್ ಕಾಯ್ದೆಯ ಕಲಂ 52(ಎ) ಮತ್ತು 63ರ ಪ್ರಕಾರ ದಾಖಲಾಗಿದ್ದ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದನು. ಪ್ರಕರಣ ದಾಖಲಾದ ನಂತರದಿಂದಲೇ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.























































 
 

ಸುಮಾರು 17 ವರ್ಷಗಳಿಂದ ಪರಾರಿಯಾಗಿರುವ ಆರೋಪಿತನನ್ನು ಬರ್ಕೆ ಪೊಲೀಸ್‌ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾರ್ಚ್ 24, 2026 ರಂದು ಪತ್ತೆ ಹಚ್ಚಿ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

error: Content is protected !!
Scroll to Top