ಸುಳ್ಯ: ಗೋವು ಅಕ್ರಮ ಸಾಗಿಸುತ್ತಿದ್ದ ಮೂವರು ಸೆರೆ

ಸುಳ್ಯ: ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ ಘಟನೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಪಿಕಪ್ ಚಾಲಕ ಕೇರಳ ಮೂಲದ ಇಸಾಕ್ (40), ಸುಳ್ಯದ ನಾವೂರು ನಿವಾಸಿ ಇಬ್ರಾಹಿಂ ಎಂಬವರು ಗೋವುಗಳನ್ನು ಅಮರಮುಡ್ನೂರಿನಿಂದ ಖರೀದಿಸಿ, ಅನುಮತಿ ಪಡೆಯದೆ ವಧೆ ಮಾಡುವ ಸಲುವಾಗಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆಲೆಟ್ಟಿ ಮಾರ್ಗವಾಗಿ ಕೇರಳದ ಕಡೆಗೆ ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸುಳ್ಯ ಪೊಲೀಸರು ಪಿಕಪ್ ವಾಹನವನ್ನು ಹಿಂಬಾಲಿಸಿ, ನಾರ್ಕೊಡು ಮಿತ್ತಡ್ಕ ಎಂಬಲ್ಲಿ ಅಡ್ಡಹಾಕಿ ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಿಸುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top