ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ

ವಿಡಿಯೋ ವೈರಲ್‌ ಆಗಿ ಆಡಳಿತ ಪಕ್ಷಕ್ಕೆ ಮುಜುಗರ ತಂದ ಪ್ರಕರಣ

ಮುಂಬೈ : ಸಚಿವರೊಬ್ಬರು ತೃತೀಯಲಿಂಗಿ ಜತೆ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನರಹರಿ ಜಿರ್ವಾಲ್ ತಮ್ಮ ಬಂಗಲೆಯಲ್ಲಿ ಟ್ರಾನ್ಸ್​ಜೆಂಡರ್ ಜತೆ ಇದ್ದ ವಿಡಿಯೋ ವೈರಲ್ ಆಗಿದೆ. ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ಎರಡು ತಿಂಗಳಲ್ಲಿ ನರಹರಿ ಜಿರ್ವಾಲ್‌ ಹುಟ್ಟು ಹಾಕಿದ ಎರಡನೇ ವಿವಾದವಿದು. ಸಚಿವಾಲಯದಲ್ಲಿ 35 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಅವರನ್ನು ಎಸಿಬಿ ರೆಡ್ ಹ್ಯಾಂಡ್ ಆಗಿ ಹಿಡಿದಿತ್ತು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಎನ್‌ಸಿಪಿ ಅಧ್ಯಕ್ಷೆಯೂ ಆಗಿರುವ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರಿಗೆ ಸಚಿವರು ವಿವರಣೆ ನೀಡಿದ್ದರು ಎಂದು ತಿಳಿದುಬಂದಿದೆ.























































 
 

ನಾಸಿಕ್ ಜಿಲ್ಲೆಯ ದಿಂಡೋರಿಯಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮತ್ತು ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಉಪಸಭಾಪತಿಯಾಗಿದ್ದ ಜಿರ್ವಾಲ್ (66) ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ದಿ.ಅಜಿತ್ ಪವಾರ್ ಅವರ ಆಪ್ತರಾಗಿದ್ದರು. ಜೂನ್ 2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಉರುಳಿಸಿದಾಗ ನರಹರಿ ಹಂಗಾಮಿ ಸ್ಪೀಕರ್ ಆಗಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಜಿರ್ವಾಲ್ ಅವರ ಅಶ್ಲೀಲ ವಿಡಿಯೋ ಮಹಾರಾಷ್ಟ್ರ ರಾಜಕೀಯದಲ್ಲಿನ ನೈತಿಕ ಕುಸಿತಕ್ಕೆ ಒಂದು ಸ್ಪಷ್ಟ ಉದಾಹರಣೆಯಾಗಿದೆ. ಮುಖ್ಯಮಂತ್ರಿಗಳು ತಕ್ಷಣವೇ ಜಿರ್ವಾಲ್ ಅವರನ್ನು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಹೇಳಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಂಡಿರುವ ತೃತೀಯಲಿಂಗಿಯನ್ನು ಪವನ್ ಯಾದವ್ ಎಂದು ಗುರುತಿಸಲಾಗಿದೆ. ಆತನ ಸಹೋದರ ಮತ್ತು ವಕೀಲರಾದ ರವಿ ಯಾದವ್, ಪವನ್ ಜನರನ್ನು ಮರುಳಾಗಿಸಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಎಂದು ಹೇಳಿದ್ದಾರೆ.

error: Content is protected !!
Scroll to Top