ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಸಂವಾದ

ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ದೇಶದ ಒಟ್ಟಾರೆ ಸಿದ್ಧತೆ ಬಗ್ಗೆ ಚರ್ಚೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ದೇಶದ ಒಟ್ಟಾರೆ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸುವ ಮುಖ್ಯ ಉದ್ದೇಶವನ್ನು ಈ ಸಭೆ ಹೊಂದಿದೆ. ಆದರೆ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ ಬದಲಿಗೆ, ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆಯನ್ನು ಶೀಘ್ರದಲ್ಲೇ ನಡೆಸಲು ಯೋಜನೆಯಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಾರೋ ಇಲ್ಲವೋ ಅನ್ನೋದು ಕುತೂಹಲ ಕೆರಳಿಸಿದೆ.























































 
 

ಇದಕ್ಕೂ ಮುನ್ನ ಮಾ.22ರಂದು ಪ್ರಧಾನ ಮಂತ್ರಿಯವರು ಭದ್ರತೆ ಕುರಿತು ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಸಂಘರ್ಷ ಮುಂದುವರಿದರೆ ಭಾರತದ ಸನ್ನದ್ಧತೆಯನ್ನು ಪರಿಶೀಲಿಸಿದ್ದಾರೆ. ಸಭೆಯಲ್ಲಿ, ಸಂಘರ್ಷದ ಪರಿಣಾಮಗಳಿಂದ ಭಾರತೀಯರನ್ನು ರಕ್ಷಿಸಬೇಕು ಎಂದು ಸೂಚನೆ ನೀಡಿದ್ದಾರೆ.

error: Content is protected !!
Scroll to Top