ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಉಗ್ರರ ನಿಗ್ರಹಕ್ಕೆ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ರಾತ್ರಿಯಿಡೀ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ.
ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು, ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿವೆ.
ಮಾರ್ಚ್ 31ರ ರಾತ್ರಿ ಉಗ್ರರ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಲು ಶುರು ಮಾಡಿತು. ಬಳಿಕ ಸೇನೆಯಿಂದಲೂ ಪ್ರತಿದಾಳಿ ನಡೆಸಲಾಯಿತು. ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತ್ಯೆಯಾಗಿದ್ದು, ಇಬ್ಬರು ಅಥವಾ ಮೂವರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಶ್ರೀನಗರದ ಚಿನಾರ್ ಕಾರ್ಪ್ಸ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

























