ಏಪ್ರಿಲ್‌ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ?

ಬೆಂಗಳೂರು : ಮಾರ್ಚ್ 31ರಂದು ಪ್ರಥಮ ಪಿಯುಸಿ ಫಲಿತಾಂಶ ಯಶಸ್ವಿಯಾಗಿ ಪ್ರಕಟಗೊಂಡ ಬೆನ್ನಲ್ಲೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಅಧಿಕೃತ ಮೂಲಗಳ ಪ್ರಕಾರ ಏಪ್ರಿಲ್ ಎರಡನೇ ವಾರದಲ್ಲಿ (ಏಪ್ರಿಲ್ 7 ಅಥವಾ 8) ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.inನಲ್ಲಿ ಫಲಿತಾಂಶ ಪ್ರಕಟಿಸಲಿದೆ.

ಆನ್​ಲೈನ್​ನಲ್ಲಿ ಫಲಿತಾಂಶ

*ಅಧಿಕೃತ ವೆಬ್‌ಸೈಟ್ karresults.nic.inಗೆ ಭೇಟಿ ನೀಡಿ.
*ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
*ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
*‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.























































 
 

ಫಲಿತಾಂಶದ ನಂತರ ಅಂಕಗಳ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಏಪ್ರಿಲ್ 25 ರಿಂದ ಮೇ ಮೊದಲ ವಾರದವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಮಂಡಳಿ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

2026ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯದ 1217 ಕೇಂದ್ರಗಳಲ್ಲಿ ನಡೆದಿದ್ದವು. ಈ ಬಾರಿ 7 ಲಕ್ಷಕ್ಕೂ ಹೆಚ್ಚು ಮಂದಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.

error: Content is protected !!
Scroll to Top