ದೋಳ್ಪಾಡಿ: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು

ಪುತ್ತೂರು: ದೈವ ನರ್ತನದ ವೇಳೆ ದೈವ ನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ. 30ರಂದು ನಡೆದಿದೆ.

ಕಾಣಿಯೂರು ಗ್ರಾಮ ಪಂಚಾಯತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.

ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದ ದೈವ ನರ್ತಕ ಕಾಂತು ಅಜಿಲ ಮಾಲೆಂಗ್ರಿ ಮೃತಪಟ್ಟವರು. ಇವರು ಮೂಲಂಗೀರಿ ನಿವಾಸಿ.



































 
 

ಕಾಂತು ಅಜಿಲ ಅವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ. 30ರಂದು ಕಾಣಿಯೂರು ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೋತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top