ಬಂಟ್ವಾಳ : ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ 38 ವರ್ಷದ ವ್ಯಕ್ತಿಯೊಬ್ಬರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

























