ಅಕ್ರಮವಾಗಿ ಸಾಗಿಸುತ್ತಿದ್ದ 18 ಜಾನುವಾರು ರಕ್ಷಣೆ : ಓರ್ವ ಸೆರೆ

ಹಾಸನದಿಂದ ಕೇರಳಕ್ಕೆ ಕಂಟೇನರ್‌ನಲ್ಲಿ ಅಕ್ರಮವಾಗಿ ಸಾಗಾಟ

ಕಡಬ : ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಓರ್ವವನ್ನು ಕಡಬ ಠಾಣಾ ಸಬ್ ಇನ್‌ಸ್ಪೆಕ್ಟ‌ರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಬಂಧಿಸಿ, 18 ಜಾನುವಾರುಗಳನ್ನು ರಕ್ಷಿಸಿದೆ.

ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.























































 
 

ಕಂಟೇನರ್‌ನಲ್ಲಿ 18 ಜಾನುವಾರುಗಳನ್ನು ಅಮಾನುಷವಾಗಿ ಸಾಗಾಟ ಮಾಡಲಾಗುತ್ತಿರುವುದು ಕಂಡುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!
Scroll to Top