ಜಿಮ್ ಟ್ರೈನಿಂಗ್ಗೆ ಬಂದ ಯುವತಿಯರಿಗೆ ಲವ್ ಜಿಹಾದ್ ಬಲೆ
ಬೆಂಗಳೂರು : ಹುಬ್ಬಳ್ಳಿಯ ಲವ್ ಜಿಹಾದ್ ಕೇಸ್ ಆರೋಪಿ ಜಿಮ್ ಟ್ರೈನರ್ ಸಮೀರ್ ವಿರುದ್ಧ ಸಂತ್ರಸ್ತ ಯುವತಿ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ.
ಸಂತ್ರಸ್ತ ಯುವತಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್ನಲ್ಲಿ ಅಮಲು ಬರುವ ಪದಾರ್ಥ ಹಾಕಿ ನನಗೆ ಕುಡಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ವಿಡಿಯೋ ಮಾಡಿಟ್ಟುಕೊಂಡು ಬೆದರಿಕೆ ಹಾಕಿದ್ದ. ಇದಾದ ಬಳಿಕ ಬೆದರಿಕೆ ಹಾಕಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.
ಯುವತಿಯ ದೂರಿನ ಆಧಾರದ ಮೇಲೆ ಸಮೀರ್ ವಿರುದ್ಧ ಬಿಎನ್ಎಸ್ ಸೆಕ್ಷನ್ 64(1), 351, 123 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ದೂರಿನ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸಮೀರ್ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಲವ್ ಜಿಹಾದ್ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸಮೀರ್ ಬಂಡವಾಳ ಮತ್ತಷ್ಟು ಬಯಲಾಗಿದೆ. ಬೇರೆ ಬೇರೆ ಯುವತಿಯರ ಜೊತೆಗೆ ಇರುವ ಪೋಟೋಗಳು ವೈರಲ್ ಆಗಿದೆ. ಜಿಮ್ಗೆ ಬರುವ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ, ಸ್ನೇಹ ಬೆಳೆಸಿಕೊಳ್ಳುತ್ತಿದ್ದ. ಪೊಲೀಸರು ಸಮೀರ್ ಮೊಬೈಲ್ ಪರಿಶೀಲನೆ ಮಾಡಿದಾಗ ಹಲವು ವಿಚಾರಗಳು ಬಯಲಾಗಿವೆ. ಬ್ರೌಸಿಂಗ್ ಹಿಸ್ಟರಿಯಲ್ಲಿ ಅಸಭ್ಯ ಮತ್ತು ನಿಷೇಧಿತ ವೆಬ್ ಬಳಕೆ ಮಾಡುತ್ತಿರುವುದು ಗೊತ್ತಾಗಿದೆ.
























