ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ದಾಳಿ

ಟ್ರಂಪ್‌ ಇರುವಾಗಲೇ ದಾಳಿ ನಡೆಸಿ ತಪ್ಪಿಸಿಕೊಂಡ ಬಂದೂಕುಧಾರಿ

ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ಚಕಮಕಿ ನಡೆದಿದೆ. ಆ ಸಮಯದಲ್ಲಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಶ್ವೇತಭವನದೊಳಗೆ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ಬಳಿಕ ಭದ್ರತಾ ಸಂಸ್ಥೆಗಳನ್ನು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಮುಂಜಾನೆ ಶ್ವೇತಭವನದ ಎದುರಿನ ಲಫಯೆಟ್ಟೆ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಮತ್ತು ಪ್ರಸ್ತುತ ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶ್ವೇತಭವನದಲ್ಲಿ ಕಾರ್ಯಾಚರಣೆಗಳು ಎಂದಿನಂತೆ ಮುಂದುವರಿದಿದ್ದರೂ, ಭದ್ರತಾ ಕ್ರಮಗಳನ್ನು ಗಮನಾರ್ಹವಾಗಿ ಬಿಗಿಗೊಳಿಸಲಾಗಿದೆ. ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ಮತ್ತು ಯುಎಸ್ ಪಾರ್ಕ್ ಪೊಲೀಸರೊಂದಿಗೆ ಕೆಲಸ ಮಾಡುತ್ತಿರುವ ತನ್ನ ತಂಡ ಶಂಕಿತ ವ್ಯಕ್ತಿ ಮತ್ತು ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದೆ ಎಂದು ಸೀಕ್ರೆಟ್ ಸರ್ವಿಸ್ ವರದಿ ಮಾಡಿದೆ.























































 
 

ಗುಂಡಿನ ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಕಳೆದ ಕೆಲವು ವಾರಗಳಿಂದ ನವೀಕರಣಕ್ಕಾಗಿ ಲಫಯೆಟ್ಟೆ ಪಾರ್ಕ್ ಮುಚ್ಚಲ್ಪಟ್ಟಿದೆ ಮತ್ತು ಪ್ರಸ್ತುತ ಬ್ಯಾರಿಕೇಡ್‌ಗಳಿಂದ ಆವೃತವಾಗಿದೆ. ಇನ್ನೊಂದೆಡೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿರುವ ಊಹಾಪೋಹಗಳನ್ನು ಶ್ವೇತಭವನ ತಳ್ಳಿಹಾಕಿದೆ.

ಕೆಲವು ಎಕ್ಸ್​ ಪೋಸ್ಟ್​ಗಳಲ್ಲಿ ಟ್ರಂಪ್ ಅವರನ್ನು ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿಕೊಂಡಿದ್ದವು. ಈ ವೀಡಿಯೊ 2024ರಲ್ಲಿ ಟ್ರಂಪ್ ಗುಂಡಿನ ದಾಳಿಯಲ್ಲಿ ಗಾಯಗೊಂಡ ನಂತರ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿರುವ ಆಸ್ಪತ್ರೆಯಿಂದ ಬಿಡುಗಡೆಯಾದಾಗ ತೆಗೆದ ವಿಡಿಯೋ ಎಂದು ಹೇಳಲಾಗುತ್ತಿದೆ.

ಶ್ವೇತಭವನವು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ, ಆದರೆ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಜುಲೈ 13, 2024 ರಂದು, ಒಂದು ರ್ಯಾಲಿಯಲ್ಲಿ ಗುಂಡು ಅವರ ಹತ್ತಿರ ಹಾದುಹೋಗಿತ್ತು ಕಿವಿ ಭಾಗಕ್ಕೆ ಪೆಟ್ಟಾಗಿತ್ತು. ರಯಾನ್ ರೋತ್ ಎಂಬ ವ್ಯಕ್ತಿಯನ್ನು ಅವರ ಗಾಲ್ಫ್ ಕ್ಲಬ್ ಬಳಿ ದಾಳಿ ನಡೆಸಲು ಯೋಜಿಸಿದ್ದಕ್ಕಾಗಿ ಬಂಧಿಸಲಾಗಿತ್ತು. ಯುದ್ಧದ ಸಂದರ್ಭದಲ್ಲಿ ಶ್ವೇತಭವನದ ಬಳಿ ನಡೆದ ದಾಳಿಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

error: Content is protected !!
Scroll to Top