ಏ.10ರಿಂದ ಟೋಲ್‌ಗೇಟ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ರದ್ದು

ಯುಪಿಐ ಪೇಮೆಂಟ್‌ಗೆ ಶೇ.25 ಹೆಚ್ಚುವರಿ ಶುಲ್ಕ

ನವದೆಹಲಿ: ದೇಶದ ಎಲ್ಲಾ ಟೋಲ್ ಗೇಟ್‌ಗಳನ್ನು ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಏಪ್ರಿಲ್ 10 ರಿಂದ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಟೋಲ್ ಪ್ಲಾಜಾ ಹಾದು ಹೋಗಲು ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25 ರಷ್ಟು ಹೆಚ್ಚುವರಿ ಹಣವನ್ನು ಚಾಲಕರು ಪಾವತಿ ಮಾಡಬೇಕಾಗುತ್ತದೆ.























































 
 

ಒಂದು ವೇಳೆ ಚಾಲಕರು ಫಾಸ್ಟ್‌ಟ್ಯಾಗ್‌ ಮತ್ತು ಯುಪಿಐ ಇವೆರಡರ ಮೂಲಕ ಪಾವತಿಸಲು ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ನಿಯಮಗಳಡಿ ವಾಹನ ಪ್ರವೇಶವನ್ನ ನಿರಾಕರಿಸಬಹುದು. ಅಥವಾ ಇ-ನೋಟಿಸ್ ನೀಡಬಹುದು. 3 ದಿನಗಳ ಒಳಗೆ ದಂಡದ ಮೊತ್ತ ಪಾವತಿಸದಿದ್ದರೆ ದಂಡದ ಮೊತ್ತ ದುಪ್ಪಟ್ಟಾಗಬಹುದು.

ಟೋಲ್ ಬೂತ್‌ಗಳಲ್ಲಿ ಕಾಯುವ ಸಮಯವನ್ನು ಕಡಿಮೆ ಮಾಡಲು ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವ ನಿರ್ಧಾರಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

error: Content is protected !!
Scroll to Top