ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ವೆಬ್ಸೈಟ್, ಮೊಬೈಲ್ ಆ್ಯಪ್ನಲ್ಲಿ ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು https://karresults.nic.in 3, “ಕರ್ನಾ ಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್ಎಂಎಸ್ ಮೂಲಕವೂ ಫಲಿತಾಂಶ ರವಾನೆಯಾಗುವ ವ್ಯವಸ್ಥೆ ಕಲ್ಪಿಸಲಾಗಿದೆ.
ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವೇಳೆಯೇ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಅಂಕಪಟ್ಟಿ ಡಿಜಿಲಾಕರ್ ಮೂಲಕ ಯಾವ ರೀತಿ ಡೌನ್ಲೋಡ್ ಮಾಡಿ ಕೊಳ್ಳಬೇಕು ಎಂಬ ಮಾಹಿತಿ https://tinyurl.com/mw84wmh9 ಮೂಲಕ ತಿಳಿದುಕೊಳ್ಳಬಹುದು.
ಸಂಜೆ 6.15ಕ್ಕೆ ಮಂಡಳಿಯಲ್ಲಿ ಫಲಿತಾಂಶದ ಸಮಗ್ರ ಮಾಹಿತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ.

























