ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ರದ್ದು ವಿರುದ್ಧ ಸಲ್ಲಿಸಿದ್ದ ಪಿಐಎಲ್‌ ವಜಾ

ಸರ್ಕಾರಿ ಆದೇಶ ಲಗತ್ತಿಸದಿರುವುದಕ್ಕೆ ಅರ್ಜಿದಾರರಿಗೆ 1 ಲಕ್ಷ ರೂ. ದಂಡ

ಬೆಂಗಳೂರು : ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಪಿಐಎಲ್‌ ಸಲ್ಲಿಸಿದವರಿಗೆ ಹಿನ್ನಡೆಯಾಗಿದೆ. ಬೆಂಗಳೂರಿನ ಎಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ.

ಪಿಐಎಲ್​ ಸಲ್ಲಿಕೆ ಮಾಡಿರುವವರು ಸರ್ಕಾರದ ಆದೇಶದ ವಿವರ ಒದಗಿಸದೆ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಎಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಆ ಮೂಲಕ ಅರ್ಜಿದಾರರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.























































 
 

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದವಾದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸ್ವತಃ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲನೀಶ್​​ಗೆ ಪತ್ರ ಕೂಡ ಬರೆದಿದ್ದರು.

ಗವರ್ನರ್​​ ಈ ನಡೆ ವಿರುದ್ಧ ಸಿಡಿದೆದ್ದಿದ್ದ ಕರವೇ ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಈ ರೀತಿ ಮಾಡೋದು ತಪ್ಪು. ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ವಾಗ್ದಾಳಿ ನಡೆಸಿತ್ತು.

error: Content is protected !!
Scroll to Top