ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ

ಶಿಕ್ಷಕ, ಗರ್ಭಪಾತ ಮಾಡಿದ ವೈದ್ಯೆ ವಿರುದ್ಧ ಪೋಕ್ಸೋ ಕೇಸ್‌

ಚಿತ್ರದುರ್ಗ: ಹದಿನಾರು ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಣಿತ ಶಿಕ್ಷಕ ಎಚ್.ಒ. ರಾಜಣ್ಣ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಕೃತ್ಯದಿಂದ ಬಾಲಕಿ ಗರ್ಭ ಧರಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ರಾಜಣ್ಣ ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಶಂಕರಲಕ್ಷ್ಮೀ ಸಹಾಯದಿಂದ ಬಾಲಕಿಗೆ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.























































 
 

ವಿಷಯ ತಿಳಿಯುತ್ತಿದ್ದಂತೆಯೇ ಮಕ್ಕಳ ರಕ್ಷಣಾಧಿಕಾರಿ ರೇಖಾ ಅವರು ಚಳ್ಳಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಕ್ಷಕ ರಾಜಣ್ಣ ಮತ್ತು ಗರ್ಭಪಾತ ಮಾಡಿದ ವೈದ್ಯೆ ಶಂಕರಲಕ್ಷ್ಮೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

error: Content is protected !!
Scroll to Top