ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ನಿವಾಸಿಗಳಾದ ತಾಯಿ ಮತ್ತು ಮಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾಸು ಮಾಡುವ ಮೂಲಕ ಸಾಧನೆ ಮಾಡಿದ್ದಾರೆ.
ತಾಯಿ ನೇತ್ರಾವತಿ ವಿ. ಆರ್. ಅವರು ಈ ಬಾರಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲೇ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಇವರ ಪುತ್ರಿ ಹೇಮಶ್ರೀ ಆರ್. ಅವರು ಸರ್ಕಾರಿ ಪ.ಪೂ. ಕಾಲೇಜು ಬಿ.ಮೂಡ ಇಲ್ಲಿನ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದು 562 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

























