ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಲು ಆದೇಶ
ಬೆಂಗಳೂರು: ಗೃಹ ಬಳಕೆ ಗ್ಯಾಸ್ ಸಿಲಿಂಡರ್ 26 ದಿನಗಳ ಬಳಿಕ ಬುಕ್ ಮಾಡಿದರೆ ದಿನವೇ ವಿತರಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಸರ್ಕಾರ ಸೂಚಿಸಿದೆ. ಯಾವುದೇ ಕಾರಣಕ್ಕೂ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಬೇಕೆಂದು ಏಜೆನ್ಸಿಗಳಿಗೆ ತಿಳಿಸಿದೆ.
ಕಮರ್ಷಿಯಲ್ ಸಿಲಿಂಡರ್ ವಿಚಾರದಲ್ಲಿ ಸುಧಾರಣೆ ಆಗಿದ್ದು, ಆಟೋ ಗ್ಯಾಸ್ ಸಮಸ್ಯೆ ಇದೆ. ಕೇಂದ್ರಕ್ಕೆ ಪತ್ರ ಬರೆದರೂ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದೆ. ಸಚಿವರಾದ ಕೃಷ್ಣ ಬೈರೇಗೌಡ ಮತ್ತು ದಿನೇಶ್ ಗುಂಡೂರಾವ್ ಕೇಂದ್ರ ಶೀಘ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಮದ್ಯೆ ಯುದ್ಧ ನಿಲ್ಲಲಿ ಎಂದು ಉಡುಪಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಯಾಗ ಹಮ್ಮಿಕೊಳ್ಳಲಾಗಿದೆ. ವಿವಿಧ ಸಂತರು, ಸಾವಿರಾರು ಭಕ್ತರು ಪಾಲ್ಗೊಂಡು ವಿಶ್ವಶಾಂತಿಗಾಗಿ ಪ್ರಾರ್ಥಿಸಿದ್ದಾರೆ.

























