ವಿವಾಹಿತ ಮಹಿಳೆಯಿಂದ ಬ್ಲ್ಯಾಕ್‌ಮೇಲ್‌ : ಜಿಮ್‌ ಟ್ರೈನರ್‌ ಆತ್ಮಹತ್ಯೆ

ನೆಲಮಂಗಲ: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದರು.

ಜಿಮ್‌ನಲ್ಲಿ ದಿಲೀಪ್‌ಗೆ 42 ವರ್ಷದ ವಿವಾಹಿತ ಮಹಿಳೆಯ ಪರಿಚಯವಾಗಿತ್ತು. ಆಕೆಗೆ ಮದುವೆಯಾಗಿದ್ದರೂ ದಿಲೀಪ್ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಳು. ನಂತರ ಆಕೆ ಬ್ಲ್ಯಾಕ್‌ಮೇಲ್‌ ಮಾಡಲಾರಂಭಿಸಿದಳು ಎಂದು ದಿಲೀಪ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಬ್ಲ್ಯಾಕ್‌ಮೇಲ್‌ನಿಂದ ನೊಂದು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾವಿಗೂ ಮುನ್ನ ಮಹಿಳೆಗೆ ದಿಲೀಪ್ ಕರೆ ಮಾಡಿ ವಿಷಯ ತಿಳಿಸಿಯೇ ದಿಲೀಪ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ದಿಲೀಪ್‌ ಜೊತೆಗೆ ಸಂಬಂಧದಲ್ಲಿದ್ದಳು ಎನ್ನಲಾದ ವಿವಾಹಿತ ಮಹಿಳೆ ಇನ್‌ಸ್ಟಾಗ್ರಾಮ್‌ ಮೂಲಕ ದಿಲೀಪ್‌ ಸಹೋದರನಿಗೆ ಮೆಸೇಜ್‌ ಮಾಡಿ ನಿನ್ನ ಸಹೋದರ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಕೆ ತಿಳಿಸಿದ್ದಾಳೆ. ದಿಲೀಪ್‌ ಸಹೋದರ ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೃತದೇಹವನ್ನ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಹಾಗೂ ಸೊಕೊ ಟೀಂ ಭೇಟಿ ನೀಡಿ ಪರಿಶೀಲಿಸಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.























































 
 
error: Content is protected !!
Scroll to Top