ಅಕ್ರಮ ಕೋಳಿ ಅಂಕ: ನಾಲ್ವರ ಬಂಧನ

ವಿಟ್ಲ: ಮಾಡ ಎಂಬಲ್ಲಿ ಪಣಕ್ಕೆ ಹಣವನ್ನಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸಲಾಗಿದ್ದು, ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿ ಮಾಡಿ ಪರಾರಿಯಾಗಿದ್ದಾರೆ.

ಅಕ್ರಮ ಕೋಳಿ ಅಂಕದ ಬಗ್ಗೆ ಖಚಿತ ಮಾಹಿತಿ ಪಡೆದು ನಡೆಸಿದ ಕಾರ್ಯಾಚರಣೆ ಇದಾಗಿದೆ. ಸ್ಥಳದಲ್ಲಿ ಸುಮಾರು ಇಪ್ಪತ್ತರಿಂದ ಇಪ್ಪತೈದು ಮಂದಿ ಜೂಜುಕೋರರು ಕಂಡು ಬಂದಿದ್ದು, ಪೊಲೀಸರನ್ನು ಕಂಡಾಕ್ಷಣವೇ ಓಡಲಾರಂಭಿಸಿದ್ದಾರೆ.

ಬಂಧಿತರನ್ನು ವಿಟ್ಲಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ಡರು ನಿವಾಸಿ ಚಂದ್ರಹಾಸ (32) ಎಂದು ಗುರುತಿಸಲಾಗಿದೆ.‌ ಆದರೆ, ಉಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಮುಂದಾದಾಗ ಬಾಬಣ್ಣ ಮತ್ತು ಹೊನ್ನಪ್ಪ ಹರಿಜನ ಎಂಬವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ 3 ಕೋಳಿಗಳು, 1000 ರೂ. ನಗದು ಹಾಗೂ ಇತರೆ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.























































 
 

ಈ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

error: Content is protected !!
Scroll to Top