ಈ ವರ್ಷ ಅವಧಿಗಿಂತ ಮುಂಚೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ

ಇಂದು ಅಥವಾ ನಾಳೆ ಪ್ರಕಟವಾಗುವ ಸಾಧ್ಯತೆ

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಬಹುತೇಕ ಏಪ್ರಿಲ್ 14 ಅಥವಾ 15ರ ಒಳಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ. ಈ ವರ್ಷದ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಅಂಕಪಟ್ಟಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಸಿಬಿಎಸ್ಇ ಈ ಬಾರಿ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಪ್ರಕಟವಾಗುತ್ತಿದ್ದ ಫಲಿತಾಂಶವನ್ನು ಈ ಬಾರಿ ಏಪ್ರಿಲ್ ಮಧ್ಯಭಾಗದಲ್ಲೇ ಬಿಡುಗಡೆ ಮಾಡಲು ಮಂಡಳಿ ನಿರ್ಧರಿಸಿದೆ. ಮೇ 15ರಿಂದ ಜೂನ್ 1ರವರೆಗೆ ಎರಡನೇ ಹಂತದ ಪರೀಕ್ಷೆಗಳು ನಡೆಯಲಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.























































 
 

ಸಿಬಿಎಸ್ಇ ಅಧಿಕೃತ ವೆಬ್‌ಸೈಟ್ results.cbse.nic.in ಅಥವಾ cbse.gov.in ಗೆ ಲಾಗ್ ಇನ್ ಆಗಿ ಫಲಿತಾಂಶ ನೋಡಬಹುದು. ಮುಖಪುಟದಲ್ಲಿ ಕಾಣುವ ‘Secondary School Examination (Class X) Results 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.ರೋಲ್ ನಂಬರ್ (Roll Number), ಸ್ಕೂಲ್ ನಂಬರ್ (School Number) ಮತ್ತು ಅಡ್ಮಿಟ್ ಕಾರ್ಡ್ ಐಡಿ (Admit Card ID) ಅನ್ನು ನಮೂದಿಸಿ. ವಿವರಗಳನ್ನು ಸಲ್ಲಿಸಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ. ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿಗಳನ್ನು ಪಡೆಯಲು ಡಿಜಿಲಾಕರ್ ಸುಲಭವಾದ ಮಾರ್ಗವಾಗಿದೆ. ವಿದ್ಯಾರ್ಥಿಗಳು ತಮ್ಮ ‘APAAR ID’ ಅಥವಾ ಶಾಲೆಯಿಂದ ನೀಡಲಾದ ಆಕ್ಸೆಸ್ ಕೋಡ್ (Six-digit PIN) ಬಳಸಿ ಡಿಜಿಲಾಕರ್ ಅಪ್ಲಿಕೇಶನ್‌ನಲ್ಲಿ ತಮ್ಮ ಮೂಲ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ಸುರಕ್ಷಿತವಾಗಿ ಪಡೆಯಬಹುದು.

ಪ್ರತಿಯೊಂದು ವಿಷಯದಲ್ಲಿ ತೇರ್ಗಡೆಯಾಗಲು ವಿದ್ಯಾರ್ಥಿಗಳು ಕನಿಷ್ಠ ಶೇ.33 ಅಂಕಗಳನ್ನು ಗಳಿಸಬೇಕು. ಫಲಿತಾಂಶ ಪ್ರಕಟವಾದ ನಂತರ, ಯಾವುದಾದರೂ ವಿಷಯದಲ್ಲಿ ಅಂಕ ಕಡಿಮೆ ಬಂದಿದ್ದರೆ ಅಥವಾ ತೃಪ್ತಿ ಇಲ್ಲದಿದ್ದರೆ, ವಿದ್ಯಾರ್ಥಿಗಳು ಮೇ 15 ರಿಂದ ನಡೆಯಲಿರುವ ಪರೀಕ್ಷೆಯಲ್ಲಿ ಗರಿಷ್ಠ 3 ವಿಷಯಗಳಿಗೆ ಹಾಜರಾಗಲು ಅವಕಾಶವಿದೆ.

error: Content is protected !!
Scroll to Top