ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ತಾಪಮಾನ ಏರಿಕೆ

ಬೆಂಗಳೂರು: ಬಿಸಿಲಿನ ಧಗೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ 16 ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಎ. 16 – 20 ರ ವರೆಗೆ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಹೆಚ್ಚಾಗಲಿದ್ದು, ಆದ್ದರಿಂದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಗರಿಷ್ಟ ತಾಪಮಾನ ಏರಿಕೆಯಾಗಲಿದ್ದು, ಮಧ್ಯಾಹ್ನ ವೇಳೆಯಲ್ಲಿ ಅನಗತ್ಯವಾಗಿ ಜನರು ಹೊರ ಹೋಗದಂತೆ ಇಲಾಖೆ ಎಚ್ಚರಿಸಿದೆ.

ಹಾಗೆಯೇ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವಂತೆ, ನಿರ್ಜಲೀಕರಣವಾಗುವುದನ್ನು ತಪ್ಪಿಸಿ ಆರೋಗ್ಯ ಕಾಪಾಡಿಕೊಳ್ಳುವಂತೆಯೂ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.























































 
 

error: Content is protected !!
Scroll to Top