ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ: ಚಾಲಕ ಸಾವು

ಬೆಳ್ತಂಗಡಿ: ನಾಯಿಯೊಂದು ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಆಸ್ರತ್ರೆಗೆ ಸಾಗಿಸುವ ದಾರಿಯಲ್ಲೇ ‌ಮೃತಪಟ್ಟ ಘಟನೆ ಆಳದಂಗಡಿಯಲ್ಲಿ ‌ನಡೆದಿದೆ.

ನಾವರ ಗ್ರಾಮದ ಹಾರಡ್ಡೆ ನಿವಾಸಿ ದೇವಪ್ಪ ಯಾನೆ ಸುಧಾಕರ (37) ಎಂಬವರೇ ಮೃತ ದುರ್ದೈವಿ.

ಗುರುವಾಯನಕೆರೆಯಿಂದ ಆಳದಂಗಡಿ ಕಡೆಗೆ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿಯಾಗಿ ಚಾಲಕ ಸುಧಾಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಸಮಯದಲ್ಲಿ ಅರ್ಧ ದಾರಿಯಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.























































 
 

ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top