ನವದೆಹಲಿ: ಜಾರ್ಖಂಡ್ನ ಪಿಪರ್ವಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮಹಿಳಾ ನಕ್ಸಲ್ ಕಮಾಂಡರ್ ಸೇರಿದಂತೆ ನಾಲ್ಕು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.
ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ತಲೆೆಗ 15 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ ಶಹದಿಯೋ ಮಹ್ತೋ ಮತ್ತು ಮಹಿಳಾ ನಕ್ಸಲ್ ನತಾಶಾ ಸಾವನ್ನಪ್ಪಿದ್ದಾರೆ ಎನ್ನುವುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರದೇಶದಲ್ಲಿ ನಕ್ಸಲರಿರುವ ಬಗ್ಗೆ ಖಚಿತ ಮಾಹಿತಿಯನ್ವಯ ಈ ದಾಳಿ ನಡೆಸಲಾಗಿದೆ. ಕೋಬ್ರಾ ಬೆಟಾಲಿಯನ್ನ ಸೈನಿಕರು ಛತ್ರ-ಹಜಾರಿಬಾಗ್ ಗಡಿಯಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದು ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದು, ಸ್ಥಳದಿಂದ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

























