ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಸಾವು, ಓರ್ವ ಗಂಭೀರ

ಕಾರವಾರ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ದಾಂಡೇಲಿಯ ಅಜಂಗಾವ ಎಂಬಲ್ಲಿ ನಡೆದಿದೆ.

ಮೃತರನ್ನು ಧಾರವಾಡದ ಫರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಹಳಿಯಾಳದ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ದಾಂಡೇಲಿಯಿಂದ ಹಳಿಯಾಳಕ್ಕೆ ತೆರಳುವ ಸಮಯದಲ್ಲಿ ಈ ಘಟನೆ ನಡೆದಿದೆ. ಢಿಕ್ಕಿಯ ಭೀಕರತೆಗೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ.























































 
 

ದಾಂಡೇಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top