ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ

ಪುತ್ತೂರು : ಪೇಟೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.

ಏಪ್ರಿಲ್ 20ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದೇವಸ್ಥಾನದ ಕಚೇರಿಯ ಬಳಿ ಜನರು ಗುಂಪು ಸೇರಿರುವುದನ್ನು ಗಮನಿಸಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಅಲ್ಲಿ ಇಬ್ಬರು ವ್ಯಕ್ತಿಗಳು ಪರಸ್ಪರ ಗಲಾಟೆ ನಡೆಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ಕಂಡುಬಂದಿದೆ.

ಪೊಲೀಸರು ಗಲಾಟೆ ನಡೆಸದಂತೆ ಎಚ್ಚರಿಕೆ ಮತ್ತು ತಿಳುವಳಿಕೆ ನೀಡಿದರೂ ಅದನ್ನು ಲೆಕ್ಕಿಸದೆ ಅವರು ಗಲಾಟೆಯನ್ನು ಮುಂದುವರಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 48/2026, ಕಲಂ 194(2) ಬಿಎನ್ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.























































 
 
error: Content is protected !!
Scroll to Top