ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ನಡೆದಿದೆ.
ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದರು.
ಕರುಣಾ ಲಾಡ್ಜ್‌ನಲ್ಲಿ ಘಟನೆ ನಡೆದಿದ್ದು, ಮೈಸೂರು ಮೂಲದ ದಂಪತಿ ಮತ್ತು ಅವಳಿ ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.