ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬರ್ಬರವಾಗಿ ಕೊಲೆಯಾಗಿದ್ದ ಆರಿಫ್‌

ಮಂಗಳೂರು: ತೊಕ್ಕೊಟ್ಟು ಫ್ಲೈ ಓವರ್‌ನಲ್ಲಿ ಇತ್ತೀಚೆಗೆ ನಡೆದ ರೌಡಿಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 11ಕ್ಕೆ ಏರಿದೆ.

ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಮುಹಮ್ಮದ್ ಸುಹೈಲ್ ಸಹಕಾರ ನೀಡಿದ್ದಾನೆ. ಪೊಲೀಸರು ವಿವರವಾದ ತನಿಖೆಯ ನಂತರ ಸುಹೈಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.























































 
 

ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನರ ಬಂಧನ ಆಗಿತ್ತು. ಇದೀಗ ಮುಹಮ್ಮದ್ ಸುಹೈಲ್ ಬಂಧನದೊಂದಿಗೆ ಈ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಆರಿಫ್ ಕೊಲೆ ಪ್ರಕರಣದಲ್ಲಿ 15 ಮಂದಿಯ ಪಾತ್ರ ಇರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ಕಳೆದ ಮಾರ್ಚ್ 27ರ ಮುಂಜಾನೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕಿನಲ್ಲಿ ಸಂಚರಿಸುತ್ತಿದ್ದ ರೌಡಿಶೀಟರ್‌ ಆರಿಫ್‌ನನ್ನು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

error: Content is protected !!
Scroll to Top