ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ: ಅಪಾರ ನಷ್ಟ

ಕಾರ್ಕಳ: ಗಾಂಧಿ ಮೈದಾನದ ಹತ್ತಿರದಲ್ಲಿರುವ ಶಾಂಭವಿ ಡಿವೈನ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ.

ಎಸಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಈ ದುರಂತ ನಡೆದಿದ್ದು, ಸುಮಾರು ಐದು ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸಂದೀಪ್ ಹೆಗ್ಡೆ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ಟಿವಿ ಸೇರಿದಂತೆ ಇತರ ಪರಿಕರಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.























































 
 

error: Content is protected !!
Scroll to Top