ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಾವಿನ ಸುತ್ತ ಅನುಮಾನ
ಬೆಂಗಳೂರು: ಬಾಡಿಗೆ ಮನೆಯಲ್ಲಿ ಬೆತ್ತಲೆ ಹಾಗೂ ಕೊಳೆತ ಸ್ಥಿತಿಯಲ್ಲಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಪೂಜಾ ದತ್ತ ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಪೂಜಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವಳು ಇತ್ತೀಚಿಗೆ ಕೆಲಸ ಕಳೆದುಕೊಂಡಿದ್ದರು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದಋು. ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಭೀಕರ ದೃಶ್ಯ ಕಣ್ಣಿಗೆ ಬಿದ್ದಿದೆ. ಪೂಜಾ ದತ್ತ ಅವರ ಮೃತದೇಹ ಸಂಪೂರ್ಣವಾಗಿ ಬೆತ್ತಲೆ ಸ್ಥಿತಿಯಲ್ಲಿ ಮತ್ತು ಅರೆಕೊಳೆತ ಸ್ಥಿತಿಯಲ್ಲಿತ್ತು. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸಾವು ಸಂಭವಿಸಿ ಕನಿಷ್ಠ 2-3 ದಿನಗಳು ಕಳೆದಿರಬಹುದು ಎಂದು ಶಂಕಿಸಲಾಗಿದೆ.
ಪೂಜಾ ದತ್ತಾ ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದರು. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ವಾಸವಿದ್ದರು. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್ ಪತ್ತೆಯಾಗಿದೆ. ರೂಂ ತುಂಬಾ ಕೆಲ ಪೇಪರ್‌ಗಳು ಹರಿದಾಕಿರೋದು ಪತ್ತೆಯಾಗಿದೆ. ದುರ್ವಾಸನೆಯಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದು ಸಾವಿನ ಕುರಿತು ಭಾರಿ ಅನುಮಾನಗಳನ್ನು ಮೂಡಿಸಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೃತದೇಹವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೂಜಾ ಅವರ ಫೋನ್ ಕರೆಗಳು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪೂಜಾ ದತ್ತಾ ಕಳೆದ ಮೂರು ವರ್ಷಗಳಿಂದ ನನ್ನ ಮನೆಯಲ್ಲಿ ಬಾಡಿಗೆಗೆ ಇದ್ದರು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅವಿವಾಹಿತೆಯಾಗಿದ್ದರು. ಹೆಚ್ಚಾಗಿ ಹಿಂದಿ ಭಾಷೆಯಲ್ಲೇ ಮಾತನಾಡುತ್ತಿದ್ದಳು ಎಂದು ಮಾಲಕಿ ಜಾನಕಮ್ಮ ಹೇಳಿದ್ದಾರೆ. ಪೂಜಾಳನ್ನು ನೋಡಲು ಓರ್ವ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಆತನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು. ಆದರೆ ಆ ಜಗಳಕ್ಕೆ ಕಾರಣವೇನು ಎಂಬುದು ಮಾತ್ರ ತಿಳಿಯುತ್ತಿರಲಿಲ್ಲ.
ಕೊನೆಯ ಬಾರಿಗೆ ನಾನು ಪೂಜಾಳನ್ನು ಕಳೆದ ಗುರುವಾರ ನೋಡಿದ್ದೆ. ಆಕೆ ದಿನಸಿ ಸಾಮಗ್ರಿಗಳನ್ನು ತರಲು ಮೂರನೇ ಮಹಡಿಯಿಂದ ಕೆಳಗಿಳಿದು ಬರುತ್ತಿದ್ದಳು. ಆನಂತರ ಆಕೆ ಕಾಣಿಸಿಕೊಂಡಿರಲಿಲ್ಲ. ಇಂದು ಪಕ್ಕದ ಮನೆಯ ಯುವಕರು ಮನೆಯಿಂದ ಭಾರಿ ದುರ್ನಾತ ಬರುತ್ತಿದೆ ಎಂದು ತಿಳಿಸಿದರು. ತಕ್ಷಣ ಬಾಗಿಲು ಒಡೆದು ನೋಡಿದಾಗ ಪೂಜಾ ಬೆತ್ತಲಾಗಿ, ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಮೃತದೇಹ ಸಂಪೂರ್ಣವಾಗಿ ಕೊಳೆತು ಹೋಗಿತ್ತು ಎಂದು ಹೇಳಿದ್ದಾರೆ.

























