ಬಂಟ್ವಾಳ: ಹೊಸ ಮನೆಯ ಗೃಹ ಪ್ರವೇಶದ ಸಂತಸದಲ್ಲಿದ್ದ ಮನೆಯ ಯಜಮಾನ, ಮುಸ್ಲಿಂ ವಿದ್ವಾಂಸರೊಬ್ಬರು ಮೃತಪಟ್ಚ ಘಟನೆ ಸಜೀಪಮುನ್ನೂರಿನ ಆಲಾಡಿ ಕೊಪ್ಪಳದಲ್ಲಿ ನಡೆದಿದೆ.
ಅಮೀರ್ ಅರ್ಶದಿ (36) ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ವ್ಯಕ್ತಿ. ಇವರು ಕಾಸರಗೋಡು ತಾಳಿಪಡ್ಪು ಮಸ್ಟಿದುಲ್ ಹುದಾ ಮಸೀದಿಯಲ್ಲಿ ಐದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸುತ್ತಿದ್ದರಿ.
ಇತ್ತೀಚೆಗಷ್ಟೆ ಕಿಡ್ನಿ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬಿ.ಸಿ.ರೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಜಿಪಮುನ್ನೂರು ಗ್ರಾಮದ ಆಲಂಪಾಡಿ-ಕೊಪ್ಪಳ ಎಂಬಲ್ಲಿ ನೂತನ ಮನೆ ನಿರ್ಮಿಸಿದ್ದು, ಏ.17ರಂದು ಔಪಚಾರಿಕ ಗೃಹ ಪ್ರವೇಶ ಪ್ರಕ್ರಿಯೆ ನಡೆಸಿದ್ದರು. ಏ.27 ರಂದು ಮಧ್ಯಾಹ್ನ ಬಂಧು-ಮಿತ್ರರಿಗೆ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕಾಗಿ ಭಾನುವಾರ ರಾತ್ರಿ ವರೆಗೂ ಬಂಧು-ಮಿತ್ರರಿಗೆ ಕರೆ ಮಾಡಿ ಆಹ್ವಾನಿಸಿದ್ದರು ಎಂದು ಆಹ್ವಾನ ಕರೆ ಸ್ವೀಕರಿಸಿದ ಬಂಧು-ಮಿತ್ರರು ತಿಳಿಸಿದ್ದಾರೆ.

























