ಕಾರ್ಕಳ: ಬೈಕ್ ಮತ್ತು ಸ್ಕೂಟಿ ಡಿಕ್ಕಿಯಾಗಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಚ ಘಟನೆ ಮಿಯ್ಯಾರು ಕುಂಟಿಬೈಲ್ ರಸ್ತೆಯ ನೀರಿನ ಟ್ಯಾಂಕ್ ಎದುರು ಸಂಭವಿಸಿದೆ.
ಕೆರ್ವಾಶೆಯ ಸುಖೇಶ್ ಬಂಗಾರ ಎಂಬವರೇ ಮೃತ ದುರ್ದೈವಿ.
ಕುಂಟಿಬೈಲ್ ಮಾರ್ಗದಿಂದ ಕಾರ್ಕಳಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತ ನಡೆದ ತಕ್ಷಣವೇ ಸುಖೇಶ್ ಅವರನ್ನು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಚಿದ್ದರು.
ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಅವರು ಕೆಲವು ತಿಂಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಮೃತರು ಪತ್ನಿ, ತಾಯಿಯನ್ನು ಅಗಲಿದ್ದಾರೆ.

























