ಕಲಬುರ್ಗಿ: ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೊಬ್ಬ ಕುಡುಗೋಲಿನಿಂದ ಪತ್ನಿಯನ್ನು ಹತ್ಯೆ ಮಾಡಿ, ಮಗುವನ್ನು ಹಿಡಿದುಕೊಂಡು ಬಾವಿಗೆ ಹಾರಿದ್ದಾನೆ. ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಪತಿ ಮೃತಪಟ್ಟ ಘಟನೆ ನಡೆದಿದೆ.
ಅಫಜಲಪುರದ ಮದರಾ(ಕೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅಂಜಲಿ(23) ಎಂಬಾಕೆಯನ್ನು ಪತಿ ಲಕ್ಷ್ಮೀಪುತ್ರ ಎಂಬಾತ ಕೊಲೆ ಮಾಡಿದ್ದಾನೆ. ಆ ಬಳಿಕ ತನ್ನ ಪುಟ್ಟ ಮಗುವಿನ ಜೊತೆಗೆ ಆತ್ಮಹತ್ಯೆಯ ಉದ್ದೇಶದಿಂದ ಗ್ರಾಮದ ಬಾವಿಗೆ ಹಾರಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಮಗುವನ್ನು ಬಾವಿಯಿಂದ ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಆದರೆ ಲಕ್ಷ್ಮೀಪುತ್ರ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ರೇವೂರು ಪೊಲೀಸರು ಮತ್ತು SOCO ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮತ್ತು ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆ ಮಾಡಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

























