ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಬಳಿಕ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಗೌರವ ಸಲಹೆಗಾರ ಜಯರಾಮ ಕೆದಿಲಾಯ ಶಿಬರ, ಅಧ್ಯಕ್ಷ ಲಕ್ಷ್ಮೀ ತಂತ್ರಿ ಉಪ್ಪಳ, ಉಪಾಧ್ಯಕ್ಷ ಕೆ.ಎಂ.ಬೆಳಿಯಪ್ಪ ಗೌಡ ಕೆದ್ಕಾರ್, ಕಾರ್ಯದರ್ಶಿ ಎಂ.ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ ಸುಜಯ್ ತಂತ್ರಿ ಉಪ್ಪಳ, ಪ್ರಸನ್ನ ಭಟ್ ಪಂಚವಟಿ, ಕೆ.ಗಿರೀಶ್ ರೈ ಮಣಿಯ, ಯಂ.ರವಿ ಮಣಿಯ, ಎಂ.ಸುಧೀರ್ ಹೆಬ್ಬಾರ್ ಮಣಿಯ, ಪದ್ಮನಾಭ ಪೂಜಾರಿ ಬೆದ್ರಾಳ, ಮೋನಪ್ಪ ಪುರುಷ ಮುಗೇರಡ್ಕ, ಗಣೇಶ್ ಭಟ್ ಮಜಲುಮಾರು, ಗಣೇಶ್ ಶೆಟ್ಟಿ ಶಿಬರ, ಅರ್ಚಕ ಪ್ರಸಾದ ಅಡಿಗ, ಭಕ್ತಾದಿಗಳು ಉಪಸ್ಥಿತರಿದ್ದರು.
(ಫೋಟೊ ಇದೆ… 31ಕೆಎಂ-ಮಜಲುಮಾರು)