ಮಡಿಕೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಗಾಂಜಾ ಸಮೇತ ಮಡಿಕೇರಿ ಗ್ರಾಮಾಂತರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಜಾಬೀರ್, ಒರಿಸ್ಸಾದ ಸುಲ್ತಾನ್ ಪ್ರದಾನ್, ಮದಿನಂಜು ಗ್ರಾಮದ ಸ್ವರ್ಣಲತಾ ನಾಯಕ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 15.903 ಕಿಲೋ ಗ್ರಾಮ್ ಗಾಂಜಾ ಮತ್ತು ಮೂರು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇಬ್ನಿವಳವಾಡಿ ಗ್ರಾಮದ ಸಿಂಕೋನಾದಿಂದ ಮಕ್ಕಂದೂರಿಗೆ ತೆರಳುವ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

























