ಗಡೀಪಾರು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ತಮ್ಮ ಗಡೀಪಾರು ಅರ್ಜಿಯನ್ನು ಪ್ರಶ್ನೆ ಮಾಡಿ ಮಹೇಶ್ ಶೆಟ್ಟಿ ತಿಮರೋಡಿ ‌ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದು ಮಾಡಿದೆ.

ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡೀಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಅರ್ಜಿ ವಜಾಗೊಳಿಸಿದೆ. ಗಡೀಪಾರು ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದು. ಹೀಗಾಗಿ ರಿಟ್ ಅರ್ಜಿ ಊರ್ಜಿತವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೆಯೇ ಗಡೀಪಾರು ಸಂಬಂಧ ಎರಡು ವಾರ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಸರ್ಕಾರಕ್ಕೂ ಸೂಚನೆ ನೀಡಿರುವುದಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರ ವಿರುದ್ಧ ಕೃತಕ ಬುದ್ಧಿಮತ್ತೆ (ಎಐ) ಬಳಕೆ ಮಾಡಿ ಮಾನಹಾನಿ ಉಂಟು ಮಾಡುವ ಫೋಟೊ ಮತ್ತು ಕಂಟೆಂಟ್ ಸೃಷ್ಟಿಸಿ ಹಂಚಿಕೆ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ, ಗೂಗಲ್, ಮೆಟಾ (ಫೇಸ್‌ಬುಕ್), ವಾಟ್ಸಾಪ್, ಇನ್‌ಸ್ಟಾಗ್ರಾಂ ವೇದಿಕೆಗಳಿಗೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.























































 
 

ಧರ್ಮಸ್ಥಳದ ಪರವಾಗಿ ವಕೀಲ ಎಸ್. ರಾಜಶೇಖರ್ ವಾದ ಮಂಡಿಸಿದ್ದಾರೆ.

error: Content is protected !!
Scroll to Top