ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ ಜನಾಂದೋಲನ ಕಾರ್ಯಕ್ರಮದಲ್ಲಿ ಗಿರೀಶ್ ಭಾಷಣ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ಪ್ರಸಾರ ಮಾಡಿತ್ತು.





















































 
 

ಧರ್ಮಸ್ಥಳದಲ್ಲಿ ಪ್ರತಿವರ್ಷ ನಡೆಯುವ ಸಾಮುಃಇಕ ವಿವಾಹದ ಬಗ್ಗೆ ಮಟ್ಟಣ್ಣವರ್‌ ಅವಹೇಳನಕಾರಿಯಾಗಿ ಮಾತನಾಡಿದ್ದರು. ಸಾಮುಃಇಕ ವಿವಾಹವಾದ ಯುವತಿಯರ ಮೇಲೆ ಅತ್ಯಾಚಾರ ಎಸಗಲಾಗುತ್ತದೆ ಎಂಬರ್ಥದಲ್ಲಿ ಮಾತನಾಡಿದ್ದರು.

error: Content is protected !!
Scroll to Top