ಬಾಡಿಗೆ ಮನೆಯಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಕಡಬ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನೂಜಿಬಾಳ್ತಿಲ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ‌ಕೊಣಾಜೆ ನಿವಾಸಿ ಚೆನ್ನಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.

ಚೆನ್ನಪ್ಪ ಪೂಜಾರಿ ಅವರು ನೂಜಿಬಾಳ್ತಿಲದಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಮೇ. 1 ರಂದು ಮೃತರ ಪುತ್ರ ರವಿಚಂದ್ರ ಅವರಿಗೆ ಬಾಡಿಗೆ ಮನೆಯ ಮಾಲೀಕ ಕರೆ ಮಾಡಿ ಅವರ ತಂದೆ ಆತ್ಮಹತ್ಯೆಗೆ ಶರಣಾಗಿರುವ ಸಂಗತಿ ತಿಳಿಸಿದ್ದಾರೆ.





















































 
 

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top