ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್‌ ನೋಟಿಸ್‌

ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಶೃಂಗೇರಿ ರಿಸಲ್ಟ್‌

ಚಿಕ್ಕಮಗಳೂರು : ತೀವ್ರ ಕುತೂಹಲ ಕೆರಳಿಸಿರುವ ಶೃಂಗೇರಿ ವಿಧಾನಸಭೆ ಕ್ಷೇತ್ರದ ಮರು ಎಣಿಕೆಯ ಫಲಿತಾಂಶ ಈಗ ಮತ್ತೊಮ್ಮೆ ಕೋರ್ಟ್‌ ಅಂಗಳ ತಲುಪಿದೆ. ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಬಿಜೆಪಿಯ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಆದ್ರೆ, ಚುನಾವಣಾಧಿಕಾರಿ, ಫಲಿತಾಂಶವನ್ನು ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಜೀವರಾಜ್ ಪರ ವಕೀಲೆ ಡಾ.ವಂದನಾ ಪಿ.ಎಲ್‌ ಲೀಗಲ್​ ನೋಟಿಸ್ ನೀಡಿದ್ದಾರೆ.

ಹೈಕೋರ್ಟ್ ಆದೇಶದಂತೆ ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳನ್ನು ಮತ್ತೊಮ್ಮೆ ಎಣಿಕೆ ಮಾಡಲಾಗಿದೆ. ಆದರೆ ಫಲಿತಾಂಶ ಮಾತ್ರ ಪ್ರಕಟಿಸಿಲ್ಲ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಜೀವರಾಜ್ ಪರ ವಕೀಲೆ ಡಾ.ವಂದನಾ ಪಿ.ಎಲ್‌ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.​​ ಹೈಕೋರ್ಟ್ ಅಂಚೆ‌ ಮತಪತ್ರಗಳ ಎಣಿಕೆ ನಂತರ ಫಲಿತಾಂಶ ಘೋಷಿಸುವಂತೆ ಆದೇಶಿಸಿದೆ. ಆದರೆ ಫಲಿತಾಂಶ ಘೋಷಣೆ ವಿಳಂಬ ಮಾಡಲಾಗುತ್ತಿದೆ. ವಿಳಂಬ ಮಾಡಿದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಲೀಗಲ್ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.





















































 
 

ಕಳೆದ ಬಾರಿಯ ಎಲೆಕ್ಷನ್​ನಲ್ಲಿ ಕಾಂಗ್ರೆಸ್​ನ ರಾಜೇಗೌಡ 201 ಮತಗಳ ಅಂತರದಿಂದ ಗೆದ್ದಿದ್ದರು. ಸ್ವಲ್ಪ ಮತಗಳ ಅಂತರದಿಂದ ಬಿಜೆಪಿಯ ಜೀವರಾಜ್ ಸೋತಿದ್ದರು. ಆದರೆ ಅಂಚೆ ಮತಗಳಲ್ಲಿ ಹೆಚ್ಚು ಮತ ಪಡೆದಿದ್ದ ಜೀವರಾಜ್ ಅಸಿಂಧು ಆಗಿದ್ದ 279 ಮತಗಳನ್ನು ಮರು ಎಣಿಕೆ ಮಾಡುವಂತೆ ಪಟ್ಟು ಹಿಡಿದಿದ್ದರು. ಮನವಿಗೆ ಸ್ಪಂದಿಸದ ಅಂದಿನ ಚುನಾವಣಾಧಿಕಾರಿ ಫಲಿತಾಂಶ ಘೋಷಣೆ ಮಾಡಿದ್ದರು. ಹೀಗಾಗಿ ಜೀವರಾಜ್ ಬೇರೆ ದಾರಿಯಿಲ್ಲದೆ ಕಾನೂನು ಹೋರಾಟ ನಡೆಸಿದ್ದಾರೆ.

ಸತತ ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಹೈಕೋರ್ಟ್ ಸೂಚನೆಯಂತೆ ಮೇ 2ರಂದು ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು. ಮತ ಎಣಿಕೆ ಆರಂಭವಾದಾಗಿನಿಂದ ಮುಗಿಯುವವರೆಗೂ ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾಗೆ ನಡೆದಿದೆ. ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಈ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮತಚೋರಿಯ ತಿರುಗುಬಾಣ ಬಿಟ್ಟಿದ್ದಾರೆ. ಮತಚೋರಿ ಅಂತಿದ್ದವರಿಂದಲೇ ಮತಗಳ್ಳತನ ನಡೆದಿದೆ ಎಂದು ಕೇಸರಿ ಪಡೆ ಆರೋಪ ಮಾಡುತ್ತಿದೆ.

ಕಾಂಗ್ರೆಸ್ ನಾಯಕರು, ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದ್ದು, ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಅಪರಾಧ ಎಸಗಿದೆ. ಮತಗಳ ಟ್ಯಾಂಪರಿಂಗ್ ಆಗಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಫಲಿತಾಂಶ ಘೋಷಣೆ ಮಾಡದ ಸಂಬಂಧ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ, ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಲಾಗಿದೆ. ಫಲಿತಾಂಶ ಘೋಷಿಸುವಂತೆ ಆದೇಶದಲ್ಲಿ ಇಲ್ಲ. ಹೀಗಾಗಿ ಮರು ಮತ ಎಣಿಕೆ ವಿವರವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಸಮಾಜಾಯಿಷಿ ನೀಡಿದ್ದಾರೆ.

error: Content is protected !!
Scroll to Top