ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ತೀವ್ರ ಫೈಟ್‌

ಪಂಚ ರಾಜ್ಯಗಳ ಮತ ಎಣಿಕೆ ಪ್ರಗತಿಯಲ್ಲಿ

ನವದೆಹಲಿ: ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಶುರುವಾಗಿದೆ. ಇದರ ಜೊತೆಗೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯೂ ನಡೆಯುತ್ತಿದೆ.

ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಹಂತದಲ್ಲೇ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿನ ಫೈಟ್‌ ಕಂಡು ಬರುತ್ತಿದೆ. ಸದ್ಯದ ಮಾಹಿತಿಯಂತೆ 103 ಸ್ಥಾನಗಳಲ್ಲಿ ಬಿಜೆಪಿ ಮತ್ತು 102 ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.





















































 
 

ಕೇರಳದಲ್ಲಿ ಯುಡಿಎಫ್‌ 30, ಎಲ್‌ಡಿಎಫ್‌ 22 ಮತ್ತು ಬಿಜೆಪಿ 8 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆಯಯಲ್ಲಿದೆ. ತಮಿಳುನಾಡಿನಲ್ಲಿ ಡಿಎಂಕೆ 41, ಟಿವಿಕೆ 15 ಮತ್ತು ಎಐಎಡಿಎಂಕೆ 7 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಪುದುಚೇರಿಯಲ್ಲಿ ಬಿಜೆಪಿ 22 ಮತ್ತು ಕಾಂಗ್ರೆಸ್‌ 6 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಸ್ಸಾಂನಲ್ಲಿ ಬಿಜೆಪಿ 66 ಮತ್ತು ಕಾಂಗ್ರೆಸ್‌ 9 ಸ್ಥಾನದಲ್ಲಿ ಮುಂದಿದೆ.

error: Content is protected !!
Scroll to Top