ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಸಫಾರಿ
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಏ.9ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಆದರೆ ಈ ಸಲ ಮೋದಿ ಕರ್ನಾಟಕಕ್ಕೆ ಬರುತ್ತಿರುವುದು ಚುನಾವಣಾ ಪ್ರಚಾರಕ್ಕೆ ಅಲ್ಲ. ಹುಲಿ ನೀತಿಯ ಐವತ್ತನೇ ವರ್ಷಾಚರಣೆ ಬಂಡೀಪುರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿಮ ಬರುತ್ತಿದ್ದಾರೆ. ಈ ವೇಳೆ ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಪ್ರಧಾನಿ ಮೋದಿ ಅವರು ಸಫಾರಿ ಕೈಗೊಳ್ಳಲಿದ್ದಾರೆ.
ವಿಶೇಷ ಎಂದರೆ ಏ.9ರಂದೇ ರಾಹುಲ್ ಗಾಂಧಿ ಕೋಲಾರದಲ್ಲಿ ಕಾಂಗ್ರೆಸಿನ ಜೈ ಭಾರತ್ ರ್ಯಾಲಿಗೆ ಚಾಲನೆ ನೀಡಲಿದ್ದಾರೆ.
ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಮೋದಿ ಒಂದೇ ದಿನ ಕರ್ನಾಟಕದಲ್ಲಿರುವುದು ಮಹತ್ವ ಪಡೆದುಕೊಂಡಿದೆ.
ಮೋದಿ ಈಗಾಗಲೇ ಮಾರ್ಚ್ ತಿಂಗಳಲ್ಲಿ ಮೂರು ಬಾರಿ ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಈ ಮೂಲಕ ಬಿಜೆಪಿಯ ಚುನಾವಣಾ ತಯಾರಿಗೆ ವೇಗ ನೀಡಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ಪಕ್ಷದ ವತಿಯಿಂದ ನಡೆಯುವ ಪ್ರಧಾನಿ ಕಾರ್ಯಕ್ರಮ ಇನ್ನೂ ನಿಗದಿಯಾಗಿಲ್ಲ.