ಸಚಿವ ಜಮೀರ್‌ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಆಭರಣ ಕದ್ದ ಇಬ್ಬರ ಬಂಧನ

ತಾಯಿಯ ಸಂಬಂಧಿಕನಿಂದಲೇ ಕಳ್ಳತನ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಮನೆಯಿಂದ ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸೈಯದ್ ಅಮೀನ್ ಮತ್ತು ಆತನ ಸ್ನೇಹಿತ ಅಮಿರ್ ಅಹ್ಮದ್ ಬಂಧಿತ ಆರೋಪಿಗಳು.

ಸಚಿವ ಜಮೀರ್ ಮನೆಯಿಂದ ಕಳೆದ ಮೂರು ವರ್ಷದಲ್ಲಿ ಹಂತ ಹಂತವಾಗಿ ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇಪದೆ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ.





















































 
 

ಬಂಧಿತ ಸೈಯದ್ ಅಮೀನ್ ಸಚಿವ ಜಮೀರ್ ತಾಯಿಯ ಹತ್ತಿರದ ಸಂಬಂಧಿ. ಈ ನಂಟಿನಿಂದಾಗಿ ಸಚಿವರ ಮನೆಗೆ ಈತನಿಗೆ ಮುಕ್ತ ಪ್ರವೇಶವಿತ್ತು. ಪ್ರತಿದಿನ ಮನೆಗೆ ಬಂದು ಒಳ್ಳೆಯವನಂತೆ ನಟಿಸುತ್ತಿದ್ದ ಅಮೀನ್ ಯಾರೂ ಇಲ್ಲದ ಸಮಯ ನೋಡಿ 2025ರಿಂದಲೂ ಹಂತ ಹಂತವಾಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ. ಮನೆಯಲ್ಲಿ ಮದುವೆ ಸಮಾರಂಭಗಳು ಇದ್ದಾಗ ಆಭರಣಗಳನ್ನು ಎಗರಿಸುವುದು ಈತನ ಚಾಳಿಯಾಗಿತ್ತು.

ಟ್ರಾವೆಲ್ಸ್ ಬ್ಯುಸಿನೆಸ್‌ನಲ್ಲಿ ಲಾಸ್ ಆಗಿದ್ದಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಆ ಹಣ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ ಲಾಭ ಮಾಡಿಕೊಳ್ಳಲು ಪ್ಲ್ಯಾನ್ ಮಾಡಿದ್ದರು. ಆದರೆ ಕಾಲ್ ಮಾಡಿದಾಗ ರಿಸೀವ್ ಮಾಡದಿದ್ದಾಗ ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ. ಜಮೀರ್ ಅಹ್ಮದ್ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

error: Content is protected !!
Scroll to Top