ಬೆಳಗಾವಿ: ದುಷ್ಕರ್ಮಿಗಳು ತಲವಾರು ಹಿಡಿದು ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ಅಮನ್ ನಗರದಲ್ಲಿ ನಡೆದಿದೆ.
ಹಳೆಯ ವೈಷಮ್ಯದ ಕಾರಣಕ್ಕೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳು ಯುವಕರನ್ನು ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿಗಳ ಬಂಧನಕ್ಕೆ ಗಾಯಾಳುಗಳ ಕುಟುಂಬಸ್ಥರು ಆಗ್ರಹಿಸಿದ್ದು, ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
























