ನೆಲ್ಯಾಡಿ: ಡ್ರಗ್ಸ್ ಸೇವಿಸಿದ ಈರ್ವರನ್ನು ಉಪ್ಪಿನಂಗಡಿ ಪೊಲೀಸರು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿನ ನಿರ್ಮಾಣ ಹಂತದ ಟೋಲ್‌ಗೇಟ್ ಸಮೀಪ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಅಹಮ್ಮದ್ ಅನ್ಸಾರ್, ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರ ರೌಂಡ್ಸ್ ವೇಳೆ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ಮಾತನಾಡುತ್ತಾ, ವರ್ತಿಸುತ್ತಾ ನಿಂತಿದ್ದರು. ಅವರನ್ನು ವಿಚಾರಣೆ ಮಾಡಲಾದಾಗ ಸಮರ್ಪಕ ಉತ್ತರ ನೀಡುವಲ್ಲಿ ಅವರು ವಿಫಲರಾಗಿದ್ದರು.
ಇದರಿಂದ ಸಂಶಯಗೊಂಡ ಪೊಲೀಸರು ಅವರನ್ನು ತೀವ್ರ ವಿಚಾರಣೆ ನಡೆಸಿದಾಗ ಅವರಿಬ್ಬರೂ ಅಮಲು ಪದಾರ್ಥ ಸೇವನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆಯಲ್ಲಿ ಆರೋಪಿಗಳು ಡ್ರಗ್ಸ್ ಸೇವಿಸಿರುವುದು ಸಾಬೀತಾಗಿದೆ.
























