ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ಅವರ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ 7ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿಗೆ ನೀಡಲು ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಮೊಬೈಲನ್ನು ಎಸ್ಐಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಳಿಕ ಗಿರೀಶ್ ಮಟ್ಟಣ್ಣವರ್ 12.50ಕ್ಕೆ ವಾಪಸ್ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

